ಕನ್ನಡ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ ಎದೆಯ ತುಂಬ ಒತ್ತಿಕೊಂಡು ಮುತ್ತು ಮಳೆಯ ಸುರಿಸುವೆ ನನ್ನ ಎದೆಯ ರಾಜ್ಯದಲ್ಲಿ ನೀನು ರಾಣಿಯಾಗುವೆ ಪುಟ್ಟ ಗುಡಿಸಲಲ್ಲಿ ನಿನ್ನ ಪಟ್ಟದರಸಿ ಮಾಡುವೆ ಉಳ್ಳವರ ಎದೆಗೆ ಒದ್ದು ಮೈ ಮಾನ ಮುಚ್ಚುವೆ ರೆಟ್ಟೆ ಮೇಲೆ ಹೊತ್ತು ನಿನ್ನ ಜಗವ ಸುತ್ತಿ ತಣಿಸುವೆ ಬೆವರು ಹರಿಸಿ ಹೂವ ಬೆಳೆಸಿ ಮುಡಿಯಲಿಟ್ಟು ನಗಿಸುವೆ ಭುಜಕೆ ಭುಜವ ಹಚ್ಚಿ ನಿಂತು ತೋಳುಬಂಧಿ ತೊಡಿಸುವೆ ಹರಿವ ನದಿಗೆ ಅಡ್ಡ ನಿಂತು ನಿನಗೆ ದಾರಿ ಮಾಡುವೆ ಬಿಸಿಲು ಮಳೆಯ ಚಳಿಯ ನುಂಗಿ ನೆರಳು ಬೆಳಕು ಆಗುವೆ
Roman script
Badavanadare enu priye Kai tutu thinisuve Edeya thumba ottikondu Muttu maleya surisuve Nanna edeya rajyadalli Neenu raani aguve Putta gudisalalli Ninna pattadarasi maduve Ullavara edege oddu Mai mana muchuve Rette mele hottu ninna Jagava sutti tanisuve Bevaru harisi hoova belesi Mudiyallitu nagisuve Bhujake bhujava hachi nintu Tholu bandhi todisuve Hariva nadige adda nintu Ninage daari maduve Bisilu maleya chaliya nungi Neralu belaku aguve
Song details
Genre: Bhavageethe
- Composer: V. Manohar
- Lyricist: Satyananda Paathrota